ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹಿಂದೂ ಸಂಘಟನೆಯ ನಾಯಕರು ಆರೋಪಿಸಿದ್ದಾರೆ.
ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಕಾರ್ಯಕರ್ತರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಪುತ್ತೂರಿನ ಪ್ರಗತಿ ಆಸ್ಪತ್ರೆಯ ಮುಂದೆ ಸಾಕಷ್ಟು ಜನರು ಸೇರಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತ್ತು.
ಇಂದು ಪ್ರವೀಣ್ ನೆಟ್ಟಾರ್ ಅವರ ಮೃತದೇಹವನ್ನು ಇರಿಸಿರುವ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಮತ್ತು ಜನಪ್ರಿಯ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಮತ್ತು ಭಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರು ಪ್ರವೀಣ್ ನೆಟ್ಟಾರ್ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದರು.
ಇತ್ತೀಚಿಗೆ ನಡೆದ ಬೆಳ್ಳಾರೆಯ ಮಸೂದ್ ಹತ್ಯೆಯ ನಂತರದ ಪ್ರತಿಭಟನೆಯ ಸಂದರ್ಭದಲ್ಲಿ ಕೆಲವು ಯುವಕರು ಪ್ರತೀಕಾರದ, ದ್ವೇಷದ ಮಾತುಗಳನ್ನು ಆಡಿದ್ದರು ಎಂಬುದು ಕೆಲವು ಮೂಲಗಳ ಅಂಬೋಣವಾಗಿತ್ತು.