ಪುತ್ತೂರು: ನಿನ್ನೆ ಬೆಳ್ಳಾರೆಯಲ್ಲಿ ಅಪರಿಚಿತರಿಂದ ಹತ್ಯೆಗೀಡಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು.
ಬಿಜೆಪಿ ಕಾರ್ಯಕರ್ತರು ಹಾಗೂ ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು.
ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅವರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಇತ್ತೀಚಿಗೆ ನಡೆದ ಬೆಳ್ಳಾರೆಯ ಮಸೂದ್ ಹತ್ಯೆಯ ನಂತರದ ಪ್ರತಿಭಟನೆಯ ಸಂದರ್ಭದಲ್ಲಿ ಕೆಲವು ಯುವಕರು ಪ್ರತೀಕಾರದ, ದ್ವೇಷದ ಮಾತುಗಳನ್ನು ಆಡಿದ್ದರು ಎಂಬುದು ಕೆಲವು ಮೂಲಗಳ ಅಂಬೋಣವಾಗಿತ್ತು.