ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಯೋಗಿ ಮಾದರಿಯನ್ನು ಜಾರಿಗೆ ತರುವ ಪರಿಸ್ಥಿತಿ ಬಂದರೆ ಅದನ್ನು ಮಾಡಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದ ತಿಳಿಸಿದರು.
ಅವರು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಷಯದ ಬಗ್ಗೆ ಯಾವುದೇ ರೀತಿಯ ಮೃದು ಧೋರಣೆ ಇಲ್ಲ ಎಂದು ಹೇಳಿದ್ದಾರೆ.