ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಇಂದು ಇಬ್ಬರನ್ನು ಬಂಧಿಸಲಾಗಿದ್ದು, ಇಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮೊಹ್ಮದ್ ಶಫೀಕ್ (ಬೆಳ್ಳಾರೆ), ಜಾಕೀರ್(ಸವಣೂರು) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇದುವರೆಗೆ 15 ಮಂದಿಯನ್ನು ವಿಚಾರಣೆಗೊಳಪಡಿಸಿದ್ದು, ಈ ಪೈಕಿ 2 ಮಂದಿಯನ್ನು ಬಂಧಿಸಲಾಗಿದೆ.
ಘಟನೆಗೆ ಕೇರಳ ನೋಂದಣಿ ವಾಹನ ಬಳಸಿರುವ ಸಾಧ್ಯತೆಯಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.