ಮೊನ್ನೆ ರಾತ್ರಿ ಹತ್ಯೆಯಾದ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಇಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದರು.
ಮುಖ್ಯಮಂತ್ರಿಯವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಕುಟುಂಬದ ಎಲ್ಲಾ ಸದಸ್ಯರಿಗೂ ಧೈರ್ಯ ತುಂಬಿದ ಮುಖ್ಯಮಂತ್ರಿ ಮನೆಯವರಿಗೆ 25 ಲಕ್ಷ ರೂಪಾಯಿಗಳ ಮೊತ್ತದ ಚೆಕ್ ಹಸ್ತಾಂತರಿಸಿದ್ದಾರೆ.
ಈ ಮೊದಲು ಬಿಜೆಪಿ ಪಕ್ಷದ ವತಿಯಿಂದಲೂ 25 ಲಕ್ಷ ಮೊತ್ತವನ್ನು ಕೊಡುವ ನಿರ್ಧಾರ ಪ್ರಕಟಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಮೊದಲಾದವರಿದ್ದರು.
