ಮಳೆಯ ಮುನ್ನಚ್ಚರಿಕೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪುತ್ತೂರು ತಾಲೂಕಿನಲ್ಲಿ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ,ಪ್ರೌಢ ಶಾಲೆಗಳಿಗೆ ಇಂದು (ಜುಲೈ 30) ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು ತಾಲೂಕು ಉಪವಿಭಾಗಾಧಿಕಾರಿಯವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕುಗಳಲ್ಲೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇತರ ತಾಲೂಕುಗಳಲ್ಲಿ ತಹಸೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.