ರಂಗಭೂಮಿ,ಯಕ್ಷಗಾನ ಹಾಗೂ ಚಲನ ಚಿತ್ರ ಕಲಾವಿದರು ಹಾಗೂ ಕಲಾ ಪೋಷಕರೂ ಆದ ದೇವರಾಜ ಕರಬರವರ ನಿರ್ದೇಕಶಕತ್ವದ ಕರಬ ಪ್ರತಿಷ್ಠಾನ ಸಂಸ್ಥೆಯು ತನ್ನ ವಾರ್ಷಿಕೋತ್ಸವದ ಅಂಗವಾಗಿ ಕಲೋತ್ಸವ-2022 ಶೀರ್ಷಿಕೆ ಅಡಿಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು
ಈ ಸಲುವಾಗಿ ಇದೇ ಬರುವ ಶನಿವಾರ ದಿನಾಂಕ 06-08-2022 ರಂದು ಸಂಜೆ 5-30 ಕ್ಕೆ ಬೆಂಗಳೂರಿನ ಉಲ್ಲಾಳ ಉಪನಗರ ಸಮೀಪದ ವಿಶ್ವೇಶ್ವರಯ್ಯ ಬಡಾವಣೆಯ 4 ನೇ ಬ್ಲಾಕ್ ನಲ್ಲಿರುವ ಕಲಾಗುಡಿಯಲ್ಲಿ ಡಾ.ರಾಧಾಕೃಷ್ಣ ಉರಾಳರ ನಿರ್ದೇಕಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ನ ಕಲಾವಿದರಿಂದ
‘ಭಾಮ ಕಲಾಪ’ ಎಂಬ ಯಕ್ಷಗಾನ ಪ್ರದರ್ಶನ ಹಮ್ಮಿ ಕೊಂಡಿದ್ದು ಈ ಒಂದು ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಬೆಂಗಳೂರಿನ ರಾಮಸಂದ್ರ ಶಾಖೆಯ ಕರ್ನಾಟಕ ಬ್ಯಾಂಕ್ ನ ಮ್ಯಾನೇಜರ್ ಶ್ರೀ ರಾಘವೇಂದ್ರ ಕಾಮತ್,ಸಮಾಜ ಸೇವಕರಾದ ಶ್ರೀ ಪದ್ಮನಾಭ ಭರಣಿ ಹಾಗೂ ಮಾಜಿ ನಗರಪಾಲಿಕೆ ಸದಸ್ಯರು ಸಮಾಜ ಸೇವಕರು ಆದ ಶ್ರೀ ಮಂಜುನಾಥ ಸಿ.ಎಮ್ ಹಾಗೂ ಕರಬ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ದೇವರಾಜ ಕರಬರವರು ಮುಖ್ಯ ಅತಿಥಿಗಳಾಗಿ ಈ ಒಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9886066732, 9448510582 ಸಂಪರ್ಕಿಸ ಬಹುದು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

