ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2022-23ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಹರಿಕಿರಣ್ ಕೆ ಆಯ್ಕೆಯಾಗಿದ್ದಾರೆ.
ರಕ್ಷಕ-ಶಿಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಸಂಘ ಸಭೆಯಲ್ಲಿ ಆಯ್ಕೆ ಪ್ರಕಿಯೆ ನೆರವೇರಿತು. ಉಪಾಧ್ಯಕ್ಷರಾಗಿ ಸಂದರ್ಶಕ ಪ್ರಾಧ್ಯಾಪಕ ಜಯನಂದ ಪೆರಾಜೆ ಮತ್ತು ಸುಳ್ಯದ ಕೊಡಿಬೈಲಿನ ಅಶ್ವಿನಿ ಎಂ. ಜಿ ಆಯ್ಕೆಯಾದರು.
ಕಾರ್ಯದರ್ಶಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮತ್ತು ಜೊತೆ ಕಾರ್ಯದರ್ಶಿಯಾಗಿ ಕನ್ಯಾನದ ಗುರು ಎಜುಕೇಷನ್ ಟ್ರಸ್ಟ್ ಶ್ರೀ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ್ ಯು. ಎಸ್ ಹಾಗೂ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಕುಸುಮ ನೇಮಕಗೊಂಡರು. ಕೋಶಾಧಿಕಾರಿಯಾಗಿ ಕಾಸರಗೋಡಿನ ಉಕ್ಕಿನಡ್ಕದ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಆಯ್ಕೆಯಾದರು. ಸುಮಾರು 25 ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ರಕ್ಷಕ- ಶಿಕ್ಷಕ ಸಂಘದ ನೂತನ ಅಧ್ಯಕ್ಷ ಹರಿಕಿರಣ್ ಕೆ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕವಾಗಿ ಪೋಷಕರು ಹಾಗೂ ಶಿಕ್ಷಕರು ಸ್ಪಂದಿಸಲು ರಕ್ಷಕ-ಶಿಕ್ಷಕ ಸಂಘವು ಸದಾ ಕಾರ್ಯೋಮ್ಮುಖವಾಗಿರುತ್ತದೆ. ಕಾಲೇಜಿನ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘವು ಇನ್ನಷ್ಟು ಬಲ ತುಂಬುವ ಪ್ರಯತ್ನವನ್ನು ಮಾಡುತ್ತದೆ ಎಂದು ಎಲ್ಲರ ಸಹಕಾರವನ್ನು ಕೋರಿದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿ, ಪಾಲಕ, ಶಿಕ್ಷಕ, ಆಡಳಿತ ಮಂಡಳಿ ಮತ್ತು ಸಮಾಜ ಈ ನಾಲ್ಕು ವಿಭಾಗಗಳಿಂದ ಸಮಾನ ರೀತಿಯ ಆಸಕ್ತಿ ಮತ್ತು ಪ್ರೋತ್ಸಾಹ ಸಿಕ್ಕಿದಾಗ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಾಲೇಜಿನ ಆಡಳಿತ ಮಂಡಳಿ ವಿಶೇಷ ಅನುದಾನ ಮತ್ತು ಪ್ರೋತ್ಸಾಹ ನೀಡಲು ಸದಾ ಸಿದ್ದ ಎಂದರು. 2021-22ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಕೆ. ಎಸ್ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಗತವರ್ಷದ ಆಯವ್ಯಯ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ,ಸದಸ್ಯರಾದ ಕೆ. ಎನ್ ಸುಬ್ರಹ್ಮಣ್ಯ, ವತ್ಸಲಾ ರಾಜ್ಞಿ, ಇಂದಿರಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ದಿವ್ಯಾ ಜಿ ನಿರೂಪಿಸಿದರು. ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ ಉಪನ್ಯಾಸಕಿ ನವ್ಯ ವಿ ಪಿ ವಂದಿಸಿದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions