ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.
ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.
ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ , ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು