ಪುತ್ತೂರು ಅ 9: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಆರೋಹಣ – 2022 ರಾಜ್ಯ ಮಟ್ಟದ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವ್ಯಾಪಾರ ರಸಪ್ರಶ್ನೆ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಮತ್ತು ನಿಹಾರ್ ರೈ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ.
ಹೊಸ ಉತ್ಪನ್ನ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಮತ್ತು ಇಶಾ ಸುಲೋಚನಾ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.
ಹಾಗೆಯೇ ಕೊಲಾಜ್ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಚಿತ್ತಾರ ಪಟೇಲ್ ಮತ್ತು ದ್ವಿತೀಯ ಪಿಯುಸಿ ಕಲಾ ವಿಭಾಗದ ಸುಷ್ಮಿತಾ ಬಿ. ಆರ್.ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.