ಸಿರಿಬಾಗಿಲು- ಗಡಿನಾಡು ಕಾಸರಗೋಡಿನ ಪ್ರಸಿದ್ಧ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಆಜಾದಿ ಕಾ ಅಮೃತ್ ಮಹೋತ್ಸವ್ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಕಾರ್ಯಕ್ರಮದ ಅಂಗವಾಗಿ ದಿನಾಂಕ 13.08.2022ರ ಶನಿವಾರ ಮತ್ತು 14.08.2022ರ ಆದಿತ್ಯವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
13.08.2022 ರಂದು ಅಪರಾಹ್ನ 3 ಘಂಟೆಗೆ ‘ಪಾರ್ಥ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. 14.08.2022ರ ಆದಿತ್ಯವಾರ ಬೆಳಗ್ಗೆ 10 ಘಂಟೆಯಿಂದ ಕವಿಗೋಷ್ಠಿ ಮತ್ತು ಅಪರಾಹ್ನ 3 ಘಂಟೆಗೆ ‘ಶ್ರೀರಾಮ ದರ್ಶನ’ ತಾಳಮದ್ದಳೆ ನೆರವೇರಲಿದೆ.
ಎಲ್ಲಾ ಕಾರ್ಯಕ್ರಮಗಳು SV VISION LIVE ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಆಗಲಿದೆ. ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ