ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಹಾಗೂ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆ.13ರಂದು ನಡೆಯಿತು.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಕೆ ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯ ಡಾ. ಕೆ.ಎನ್ ಸುಬ್ರಹ್ಮಣ್ಯ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

