ಪುತ್ತೂರು, ಅ 14 : ಪದವಿಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಜರಗಿದ ಪದವಿಪೂರ್ವ ಕಾಲೇಜಿಗಳ ದ.ಕ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಎರಡು ಕಂಚಿನ ಪದಕವನ್ನು ಪಡೆದಿದೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಶಾಲ್ 50 ಮೀಟರ್ ಬಟರ್ ಫ್ಲೈ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.
4×100 ಮೀಟರ್ ಪ್ರೀ ಸ್ಟೈಲ್ ರೀಲೆ ನಲ್ಲಿ ಭಾಗವಹಿಸಿದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸೃಜನ್, ವಿಶಾಲ್, ಕೀರ್ತನ್ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿಕಾಸ್ ರವರನ್ನು ಒಳಗೊಂಡ ತಂಡವು ಕಂಚಿನ ಪದಕ ಪಡೆದಿದೆ.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

