ಪರಿಸರಕ್ಕೆ ಆಗುತ್ತಿರುವ ಹಾನಿಯನ್ನುಅರಿತು ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದಾದು ಅತ್ಯಗತ್ಯ.ಮಾನವ ಪರಿಸರದ ಶಿಶು. ಪರಿಸರವಿಲ್ಲದೆ ಮಾನವನ ಜೀವನಕ್ಕೆ ಯಾವುದೇ ಬೆಲೆಯಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಕಾಪಾಡಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಡಾ. ಶ್ರೀಶ ಕುಮಾರ್ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮತ್ತು ಇಕೋ ಕ್ಲಬ್ ವತಿಯಿಂದ ಆಯೋಜಿಸಲಾದ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಹೊಣೆ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಜಗತ್ತಿನಲ್ಲಿ ಮಾನವನು ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಾಣಿಗಳ ಜೀವರಕ್ಷಣೆಗೆ ಹಾನಿಯುಂಟಾಗುತ್ತಿದೆ. ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿ ಉಂಟಾಗಿದೆ. ಇದಕ್ಕೆಲ್ಲ ಮೂಲ ಕಾರಣ ಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದ ಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ.
ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪ್ರವೃತರಾಗಬೇಕು.ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ. ಹೀಗಾಗಿ ಸ್ವಚ್ಛ ಭಾರತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ.ಕೆ.ಎನ್ ಸುಬ್ರಹ್ಮಣ್ಯ ಮಾತನಾಡಿ ನಾವು ಹುಟ್ಟಿದಾಗ ಕಂಡ ಪರಿಸರಕ್ಕೂ ಈಗ ನಾವು ಕಾಣುತ್ತಿರುವ ಪರಿಸರಕ್ಕೂ ಅಜಗಜಾಂತರ ವ್ಯತ್ಯಾಸ ಇದೆ.ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕಾರದಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಈ ದೃಷ್ಟಿಯಲ್ಲಿ ಇಂದಿನ ಈ ಕಾರ್ಯಕ್ರಮ ಹಾಗೂ ಇದರ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದು, ಪಿಯುಸಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿ ಇದೀಗ ಭಾರತೀಯ ನೌಕಾಪಡೆಯಲ್ಲಿ ತರಬೇತಿ ಪಡೆದು, ಭಾರತೀಯ ನೌಕ ಸೇನೆಯಲ್ಲಿ ಸೇವೆ ಸಲ್ಲಿಸಲಿರುವ ಹಿರಿಯ ವಿದ್ಯಾರ್ಥಿಗಳಾದ ಹೃತಿಕ್ (ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ ಮತ್ತು ಶ್ರೀಮತಿ ಹರಿಣಾಕ್ಷಿ ದಂಪತಿ ಪುತ್ರ) , ಚರಣ್ (ನಿವೃತ್ತ ಸೇನಾನಿ ಸಂಪ್ಯ ನಿವಾಸಿ ಜಯರಾಮ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ) ಇವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಮುರಳಿ ಪಿ.ಜಿ ಉಪಸ್ಥಿತರಿದ್ದರು. ಉಪನ್ಯಾಸಕಿ ದೀಕ್ಷಿತ ಕಾರ್ಯಕ್ರಮ ನಿರೂಪಿಸಿ ಅತಿಥಿಗಳನ್ನು ಸ್ವಾಗತಿಸಿ ಸ್ನೇಹ ವಂದಿಸಿದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions