ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತರು ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ.
ಈ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಆಗಸ್ಟ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ. ಬಲಿಪಶು ಔರಂಗಾಬಾದ್ ಜಿಲ್ಲೆಯ ಕನ್ನಡ ತಾಲೂಕಿನ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
“ಆರೋಪಿಗಳು ಶುಕ್ರವಾರ ಗ್ರಾಮದ ಜಮೀನಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಶನಿವಾರ ಬಾಲಕಿಯ ಪೋಷಕರು ಪೊಲೀಸರನ್ನು ಸಂಪರ್ಕಿಸಿದ ನಂತರ ಅಪರಾಧ ಬೆಳಕಿಗೆ ಬಂದಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ.
“ಪೊಲೀಸರು 19 ರಿಂದ 33 ವರ್ಷ ವಯಸ್ಸಿನ ಐವರು ಪುರುಷರನ್ನು ಬಂಧಿಸಿದ್ದಾರೆ ಮತ್ತು ಅದೇ ದಿನ ಬಾಲಾಪರಾಧಿಯನ್ನು ಬಂಧಿಸಿದ್ದಾರೆ” ಎಂದು ಅಧಿಕಾರಿ ಹೇಳಿದರು.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಐವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಆಗಸ್ಟ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಮತ್ತು ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

