ಕರ್ನಾಟಕದ ಚಿಕ್ಕೋಡಿಯಲ್ಲಿ ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದ ಕಾಲೇಜು ಬಸ್ ಹಾಗೂ ಗೂಡ್ಸ್ ವಾಹನ ಢಿಕ್ಕಿ ಹೊಡೆದು ಎರಡೂ ವಾಹನಗಳ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಗೂ 40 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಈ ನಡೆದದ್ದು ಬೆಳಗಾವಿ ಅಥಣಿ ಪಟ್ಟಣದಲ್ಲಿ.
ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆ ಸೇರಿಸಲಾಗಿದೆ. ಶಿಕ್ಷಕಿ ಸೇರಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಳಗಾವಿ ಆಸ್ಪತ್ರೆ ಸೇರಿಸಲಾಗಿದೆ.
