ಪುತ್ತೂರು,ಅ 20: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆದ ಪುತ್ತೂರು ತಾಲೂಕು ಪದವಿಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನಿಶ್, ಪ್ರತೀಕ್ ಕೆ. ಎಸ್, ಪ್ರಥಮ ಪಿಯುಸಿ ವಾಣಿಜ್ಯ ವಿಬಾಗದ ವಿಘ್ನೇಶ್ ಚಂದ್ರಕಾಂತ್ ಜಾಧವ್ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ತನುಷಾ ಸಿ.ಕೆ, ಧೃತಿ ರೈ, ಎಸ್ ಪ್ರಿಯಾಂಕ, ವಿಜ್ಞಾನ ವಿಭಾಗದ ನಿಶಿತಾ ಎನ್ ಆರ್ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

