ಭದ್ರತಾ ಸಿಬ್ಬಂದಿಯನ್ನು ಹಲ್ಲೆ ಮಾಡಿ ನಿಂದಿಸಿದ ನೋಯ್ಡಾ ಮಹಿಳೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ನೋಯ್ಡಾದಲ್ಲಿ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತ ಮಹಿಳೆಯನ್ನು ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಆರೋಪಿಯನ್ನು ಭವ್ಯಾ ರೈ ಎಂದು ಗುರುತಿಸಲಾಗಿದೆ. ಇದೀಗ ನೆಟಿಜನ್‌ಗಳು ಮಹಿಳೆಯು ತನ್ನ ವೈಯುಕ್ತಿಕ ಲಾಭಕ್ಕಾಗಿ ಸಿಬಂದಿ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.
ಗೇಟ್ ತೆರೆಯಲು ವಿಳಂಬ ಮಾಡಿದ ಕಾರಣ ಮಹಿಳೆ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಕೂಡ ಘಟನೆಯ ಬಗ್ಗೆ ಗಮನ ಹರಿಸಿದ್ದು, ಮಹಿಳೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೋಯ್ಡಾ ಪೊಲೀಸರಿಗೆ ಸೂಚಿಸಿದ್ದಾರೆ.
ಭದ್ರತಾ ಸಿಬ್ಬಂದಿ ಅನೂಪ್ ಕುಮಾರ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಮಹಿಳೆಯನ್ನು ಬಂಧಿಸಲಾಯಿತು.