ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ವಿಶ್ವಾಸ ಮತ ಗೆದ್ದಿದೆ. ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಮತದಾನದ ಆರಂಭಕ್ಕೂ ಮುನ್ನ ಬಿಹಾರ ವಿಧಾನಸಭೆಯಿಂದ ಪ್ರತಿಪಕ್ಷಗಳು ಹೊರನಡೆದಿದ್ದರಿಂದ ವಿಶ್ವಾಸ ಮತ ಗೆದ್ದಿದೆ. ಈಗ ಹೇಗೂ ಲಾಲೂ ಪ್ರಸಾದ್ ಯಾದವ್ ಮಗ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿ ಸ್ಥಾನ ಅಭಾದಿತವಾಗಿ ಉಳಿದಿದೆ.
ಇನ್ನೂ ಒಂದು ಸುದ್ದಿ ಉಂಟು. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಸಾಕ್ಷಿಗಳು ಮತ್ತು ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ ಸಿವಿಲ್ ಕೋರ್ಟ್ ಹಾಜಿಪುರ ಖುಲಾಸೆಗೊಳಿಸಿದೆ.
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು 2015ರ ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದಾರೆ ಮತ್ತು ನಡವಳಿಕೆಯ ಮಾದರಿಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಅಂದ ಹಾಗೆ ಮೇಲಿನ ಎರಡೂ ಸುದ್ದಿಗಳು ಬೇರೆ, ಬೇರೆ. ಒಂದಕ್ಕೊಂದು ಸಂಬಂಧ ಉಂಟು ಅಂತ ನಾವು ಹೇಳ್ತಿಲ್ಲ!
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

