ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಫಘಾತದಲ್ಲಿ 9 ಮಂದಿ ಸಾವನ್ನಪ್ಪಿ, 13 ಮಂದಿಗೆ ಗಾಯಗಳಾಗಿವೆ.
ತುಮಕೂರು ಅಪಘಾತದಲ್ಲಿ ಸಾವಿಗೀಡಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ತುಮಕೂರಿನ ಕಲಂಬೆಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾರಿಗೆ ಟೆಂಪೋ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.
ತುಮಕೂರು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ PMNRF ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ರೂ. 50,000. ನೀಡಲಾಗುವುದು ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.