ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ
ಶ್ರೀ ಸಿದ್ಧಿವಿನಾಯಕ ಕಲಾಮಂದಿರ ಗೋಳಿತೊಟ್ಟು ಇಲ್ಲಿ ಜರಗುತ್ತಿರುವ 1575ನೇ ಮದ್ಯವರ್ಜನ ಶಿಬಿರದಲ್ಲಿ ಶ್ರೀ ದುರ್ಗಾಂಬಾ ಕಲಾಸಂಗಮ ಶರವೂರು ಇವರಿಂದ ಶುಕ್ರ ಸಂಜೀವಿನಿ ತಾಳಮದ್ದಳೆ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರ್, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೇಂಕಿ, ಮೋಹನ ಶರವೂರು
ಅರ್ಥದಾರಿಗಳಾಗಿ ಗಣರಾಜ ಕುಂಬ್ಳೆ, ದಿವಾಕರ ಆಚಾರ್ಯ ಗೇರುಕಟ್ಟೆ, ಗುಡಪ್ಪ ಬಲ್ಯ ಭಾಗವಹಿಸಿದ್ದರು.