Sunday, January 19, 2025
Homeಸುದ್ದಿಕರಾಟೆ ಪಂದ್ಯಾಟ : ಶೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯ ಮಟ್ಟಕ್ಕೆ

ಕರಾಟೆ ಪಂದ್ಯಾಟ : ಶೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯ ಮಟ್ಟಕ್ಕೆ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆ ಶ್ರೀ ಅನಂತೇಶ್ವರ ಆಂಗ್ಲ  ಮಾಧ್ಯಮ ಪ್ರೌಢಶಾಲೆ ಉಡುಪಿಯ ವಿದ್ಯಾರ್ಥಿನಿ ಕು| ಪ್ರನುಷಾ ಎಂ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದ 40-45 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣ ಇಲಾಖೆಗಳ ಸಹಕಾರದಲ್ಲಿ ಈ ಸ್ಪರ್ಧೆಯನ್ನು ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 26 ಆಗಸ್ಟ್ 2022ರಂದು ಆಯೋಜಿಸಲಾಗಿತ್ತು.

ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ಕಾರ್ನಾಡ್ ಮತ್ತು ಶಾಲಾ ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments