ನೋ ಪಾರ್ಕಿಂಗ್ ಜಾಗದಲ್ಲಿ ರಾತ್ರಿ ಹೊತ್ತು ಪಾರ್ಕಿಂಗ್ ಮಾಡಿದರೆ ಪೊಲೀಸರು ನೋಡಲ್ಲ ಅಂತೀರಾ? ಆದರೆ ಇಲ್ಲಿ ಬೇರೆ ಪೊಲೀಸರು ಬಂದಿದ್ದಾರೆ ನೋಡಿ
ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಆದರೆ ರಾತ್ರಿ ಹೊತ್ತು ಪೊಲೀಸರಿಗೆ ಗೊತ್ತಾಗುವುದಿಲ್ಲ ಎಂದು ಜನರು ಎಲ್ಲೆಂದರಲ್ಲಿ ಪಾರ್ಕ್ ಮಾಡುತ್ತಾರೆ.
ಅಂತಹುದೇ ಜಾಗದಲ್ಲಿ ಪಾರ್ಕ್ ಮಾಡಿದ ಬೈಕ್ ನ್ನು ಆನೆಯೊಂದು ಝಾಡಿಸಿ ಒದ್ದ ವೀಡಿಯೊ ಈಗ ವೈರಲ್ ಆಗುತ್ತಿದೆ. ರಾತ್ರಿ ಹೊತ್ತು ಪೊಲೀಸರ ಅನುಪಸ್ಥಿತಿಯಲ್ಲಿ ಸಂಚಾರ ನಿಯಮಗಳನ್ನು ಜಾರಿಗೊಳಿಸುವವರು ಬೇರೆಯೇ ಇದ್ದಾರೆ.
ಆನೆಯೊಂದು ರಾಜಾರೋಷವಾಗಿ ರಾತ್ರಿಯ ಹೊತ್ತಿನಲ್ಲಿ ರಸ್ತೆಯಲ್ಲಿ ಓಡಾಡುತ್ತಿತ್ತು. ಆಗ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಅದರ ಕಣ್ಣಿಗೆ ಕಾಣುತ್ತದೆ. ಆನೆಗೆ ಏನೆನ್ನಿಸಿತೋ ಏನೋ.. ಬೈಕನ್ನು ಝಾಡಿಸಿ ಒಡೆಯುತ್ತದೆ.
ನಂತರ ಮುಂದೆ ಹೋಗುತ್ತಿರುವ ಆನೆಯನ್ನು ಕಂಡು ಜನರೆಲ್ಲಾ ಭಯಗೊಂಡು ಓಡುವುದನ್ನು ವೀಡಿಯೋದಲ್ಲಿ ಕಾಣಬಹುದು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

