3800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಬರುತಿದ್ದಾರೆ.
ಸೆಪ್ಟೆಂಬರ್ 1 ರಿಂದ 2 ರವರೆಗೆ ದಕ್ಷಿಣ ಭಾರತದ ಕಿರು ಪ್ರವಾಸವನ್ನು ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 2 ರಂದು 3,800 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲು ಕರ್ನಾಟಕದ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.
ಈ ಸಂಬಂಧ ಮಂಗಳೂರು ಸಾರಿಗೆ ಸಂಚಾರದಲ್ಲಿ ವ್ಯಾಪಕ ಬದಲಾವಣೆಯನ್ನು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಇಲಾಖೆ ಹೊರಡಿಸಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ತಾತ್ಕಾಲಿಕ ಸಂಚಾರ ವ್ಯವಸ್ಥೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರ ವಿವರ ಕೆಳಗೆ ಕೊಡಲಾಗಿದೆ.







