ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಟ್ಟೆಯಲ್ಲಿ ಬಚ್ಚಿಟ್ಟಿದ್ದ 87 ಕ್ಯಾಪ್ಸುಲ್‌ಗಳ ರೂಪದಲ್ಲಿ 13 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶ, ಪ್ರಯಾಣಿಕನ ಬಂಧನ
ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಜೆಯೊಬ್ಬನ ಹೊಟ್ಟೆಯಲ್ಲಿ ಬಚ್ಚಿಟ್ಟಿದ್ದ 87 ಕ್ಯಾಪ್ಸುಲ್‌ಗಳ ರೂಪದಲ್ಲಿ 13 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಮುಂಬೈ ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ.
ಪ್ರಯಾಣಿಕನು ಅದನ್ನು ಯಾವ ರೀತಿ ಹೊಟ್ಟೆಯಲ್ಲಿ ಅಡಗಿಸಿದ್ದ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.
ಪ್ರಯಾಣಿಕನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.