ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಆಯ್ಕೆಯಾಗಿದೆ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.
ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ, ವಿಜ್ಞಾನ ವಿಭಾಗದ ನೇಹಾಲ್ ಮತ್ತು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರೇಯಾ ಭಾಗವಹಿಸಿದ್ದರು.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ, ಸುಮಂತ್ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಯಶ್ವಿನ್ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‌ಇ ವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
