ದೆಹಲಿ ವಿಮಾನ ನಿಲ್ದಾಣದಲ್ಲಿ ಚಿನ್ನದ 1699 ಗ್ರಾಮ್ ಚಿನ್ನದ ಬಳೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸೆಪ್ಟೆಂಬರ್ 7 ರಂದು ಚಿನ್ನದ ಕಳ್ಳಸಾಗಣೆ ಪ್ರಕರಣದ ಅಡಿಯಲ್ಲಿ ಇಂಡೋನೇಷ್ಯಾ ಗಣರಾಜ್ಯ ಪಾಸ್ಪೋರ್ಟ್ಗಳನ್ನು ಹೊಂದಿರುವ 2 ಪ್ರಯಾಣಿಕರನ್ನು ಅರೆಸ್ಟ್ ಮಾಡಿದ್ದಾರೆ.
ಸುಮಾರು ಒಂದೂವರೆ ಕೇಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕರು ಬಚ್ಚಿಟ್ಟಿದ್ದ 17 ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 1699 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು ಅದರ ಒಟ್ಟು ಮೌಲ್ಯ ರೂಪಾಯಿ 76 ಲಕ್ಷ ಎಂದು ತಿಳಿದುಬಂದಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

