ಜಾರ್ಖಂಡ್: ಶೋರೂಂನಲ್ಲಿ ಭಾರೀ ಅಗ್ನಿ ಅವಘಡ, ಮಾಲೀಕನ ತಾಯಿ ಸಾವು, 300 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮ
ಜಾರ್ಖಂಡ್‌ನ ಪಲಮು ಜಿಲ್ಲೆಯ ಶೋರೂಂ ಕಮ್ ಗೋಡೌನ್‌ನಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಂತಿಮವಾಗಿ ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ಬೆಂಕಿ ನಂದಿಸಲಾಯಿತು.
ಜಾರ್ಖಂಡ್‌ನ ಪಲಮುವಿನಲ್ಲಿ ಶೋರೂಂ-ಕಮ್-ಗೋಡೌನ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಸುಮಾರು 300 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
80 ವರ್ಷದ ಮೃತ ಮಹಿಳೆ ಮಾಲೀಕನ ತಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಆರಂಭಿಕ ವರದಿಗಳು ಇದು ಟಿವಿಎಸ್ ಬೈಕ್‌ಗಳ ಶೋ ರೂಂ ಎಂದು ಹೇಳುತ್ತವೆ, ಆದರೆ ಕಂಪನಿಯಿಂದ ಇನ್ನೂ ಯಾವುದೇ ದೃಢೀಕರಣವನ್ನು ಸ್ವೀಕರಿಸಲಾಗಿಲ್ಲ.
ಜಾರ್ಖಂಡ್‌ನ ಪಲಮುವಿನ ಮೇದಿನಿನಗರ ಪಟ್ಟಣದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಯಿತು ಮತ್ತು ಅಂತಿಮವಾಗಿ ಶುಕ್ರವಾರ ಬೆಳಿಗ್ಗೆ 8.30 ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು.
“ಶೋರೂಂ, ಗೋಡೌನ್ ಮತ್ತು ಸರ್ವೀಸ್ ಸೆಂಟರ್ ಎಲ್ಲವೂ ಮಾಲೀಕರ ನಿವಾಸಕ್ಕೆ ಹೊಂದಿಕೊಂಡಿವೆ. ವಯಸ್ಸಾದ ಮಹಿಳೆ ಮಾಲೀಕರ ತಾಯಿ. ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಂದು ತೋರುತ್ತದೆ” ಎಂದು ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿ ಅಭಯ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಪ್ರಾಥಮಿಕ ಹಂತದ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

