Sunday, January 19, 2025
Homeಯಕ್ಷಗಾನಇಂದು ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಇಂದು ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ  ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ ನಡೆಯಲಿದೆ.  ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಮುಂದಿನ ಲೋಕಾರ್ಪಣೆಯ ವರೆಗೆ ವಿವಿಧ ಕಲಾ ಸಾಂಸ್ಕೃತಿಕ, ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇದರ ಅಂಗವಾಗಿ ಇಂದು ಶನಿವಾರ ಅಂದರೆ ದಿನಾಂಕ 10.09.2022ನೇ ಶನಿವಾರ ಬೆಳಗ್ಗೆ 10ರಿಂದ  ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ,

ಶ್ರೀ ಮುಕೇಶ್, ಶ್ರೀ ಎಸ್. ಎನ್. ರಾಮ ಶೆಟ್ಟಿ, ಶ್ರೀ ಜಯರಾಮ ರೈ, ಯಕ್ಷಗಾನ ತರಬೇತಿಯ ಮುಖ್ಯ ಶಿಕ್ಷಕರಾದ ಶ್ರೀ ಲಕ್ಷ್ಮಣ ಕುಮಾರ್ ಮರಕಡ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments