ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ
ಪುತ್ತೂರು, ಸೆ 10: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ sಸ್ಫೂರ್ತಿ ಕೆ. ಆರ್ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸ್ಫೂರ್ತಿ ಕೆ. ಆರ್, ಫಾತಿಮತ್ ಅನೀಶ, ವಾಣಿಜ್ಯ ವಿಭಾಗದ ಧನುಷ, ಸಾತ್ವಿ, ಕಲಾ ವಿಭಾಗದ ಕುಸುಮ ಸಿ. ಎಂ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ ಜಿ ಆರ್, ಪುಣ್ಯಶ್ರೀ, ವಾಣಿಜ್ಯ ವಿಭಾಗದ ಶ್ರೇಯ, ವರ್ಷಿಣಿ, ದಿವ್ಯ ಎನ್ ಶೆಟ್ಟಿ, ಮನ್ಯ ಶೆಟ್ಟಿ, ಕಲಾ ವಿಭಾಗದ ಕೀರ್ತಿಲತಾ ಬಿ ಸಿ,ಅನನ್ಯ ಜಿ.ಕೆ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

