ದ್ವಾರಕಾ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಈ ಲೋಕದ ಯಾತ್ರೆಯನ್ನು ಮುಗಿಸಿ ಪರಮಾತ್ಮನಲ್ಲಿ ಐಕ್ಯರಾದರು.
ದ್ವಾರಕಾ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ 99 ನೇ ವಯಸ್ಸಿನಲ್ಲಿ ನಿಧನರಾದರು.
ಶಾರದಾ ಪೀಠ ಮತ್ತು ಜ್ಯೋತಿಮಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ 99 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ನಿಧನರಾಗಿದ್ದಾರೆ.
ಮಧ್ಯಪ್ರದೇಶದ ನರಸಿಂಗ್‌ಪುರದ ಜೋತೇಶ್ವರ ದೇವಸ್ಥಾನದಲ್ಲಿ ಅವರು ಕೊನೆಯುಸಿರೆಳೆದರು. ಅವರು 99 ವರ್ಷ ವಯಸ್ಸಿನವರಾಗಿದ್ದರು ಮತ್ತು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಸೆಪ್ಟೆಂಬರ್ 3 ರಂದು ಅವರು ತಮ್ಮ 99 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಅವರು ದ್ವಾರಕಾದ ಶಾರದಾ ಪೀಠ ಮತ್ತು ಜ್ಯೋತಿಮಠ ಬದರಿನಾಥರ ಶಂಕರಾಚಾರ್ಯರು. ಶಂಕರಾಚಾರ್ಯರು ರಾಮಮಂದಿರ ನಿರ್ಮಾಣಕ್ಕಾಗಿ ಸುದೀರ್ಘ ಕಾನೂನು ಹೋರಾಟ ನಡೆಸಿದರು. ಸ್ವಾತಂತ್ರ್ಯ ಚಳವಳಿಯಲ್ಲಿಯೂ ಭಾಗವಹಿಸಿದ್ದರು.