ತೆಲಂಗಾಣದ ಸಿಕಂದರಾಬಾದ್‌ನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಗೆ ಬೆಂಕಿ ಹತ್ತಿಕೊಂಡಿದ್ದು ಈ ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ನೆಲಮಹಡಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ರೀಚಾರ್ಜಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆ 1 ಮತ್ತು 2ನೇ ಮಹಡಿಯಲ್ಲಿದ್ದ ಜನರನ್ನು ಆವರಿಸಿದೆ. ಮೇಲಿನ ಮಹಡಿಗಳಲ್ಲಿದ್ದ ಹೋಟೆಲ್‌ನಲ್ಲಿ ಬೆಂಕಿ ವ್ಯಾಪಿಸಿಕೊಂಡು ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಉಳಿದ ಜನರು ಕಟ್ಟಡದಿಂದ ಜಿಗಿದಿದ್ದು, ಸ್ಥಳೀಯರು ರಕ್ಷಿಸಿದ್ದಾರೆ. ಹೆಚ್ಚಿನವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಟ್ಟಡದ ಮೇಲಿನ ಮಹಡಿಯಿಂದ ಹಲವರು ಜಿಗಿಯುವ ವೀಡಿಯೋ ದೃಶ್ಯ ವೈರಲ್ ಆಗಿದೆ.
ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಸ್ಥಳದಲ್ಲೇ ಅಗ್ನಿಶಾಮಕ ದಳ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
