ಪುತ್ತೂರು, ಸೆ 13: ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹರೀಶ್ ಶಾಸ್ತ್ರಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಶಾಲು ಹೊದಿಸಿ ಬ್ಯಾಗ್ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯರಾದ ಕೆ.ಎನ್ ಸುಬ್ರಹ್ಮಣ್ಯ, ವತ್ಸಲಾರಾಜ್ಞಿ, ಡಾ.ಮುರಳೀಕೃಷ್ಣ ರೈ, ಡಾ.ಕೃಷ್ಣ ಪ್ರಸನ್ನ ಕೆ, ಇಂದಿರಾ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಹರೀಶ್ ಶಾಸ್ತ್ರಿ ಯವರು 1997ರಿಂದ ಸುಮಾರು 25 ವರ್ಷಗಳ ಕಾಲ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಾಗಿ ಸೇವಾ ಅನುಭವವನ್ನು ಹೊಂದಿದ್ದಾರೆ. ಇವರು ಪುತ್ತೂರಿನ ಬಪ್ಪಳಿಗೆಯ ದಿ. ರಾಮಕೃಷ್ಣ ಶಾಸ್ತ್ರಿ ಬಿ ಮತ್ತು ದಿ.ದೇವಕಿ ದಂಪತಿ ಪುತ್ರ.
ತಮ್ಮಪ್ರಾಥಮಿಕ ಶಿಕ್ಷಣವನ್ನು ಬಪ್ಪಳಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಿಕ್ಷಣವನ್ನು ಕೊಂಬೆಟ್ಟಿನ ಸರಕಾರಿ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ನೆಹರೂ ನಗರದ ವಿವೇಕಾನಂದ ಸಂಸ್ಥೆಯಲ್ಲಿ ಪಡೆದು ಸ್ನಾತಕೋತ್ತರ ಪದವಿಯನ್ನು ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಪೂರೈಸಿದ್ದರು.
ಇವರು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಶತಮಾನೋತ್ಸವದ ಅಂಗವಾಗಿ ನಡೆದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅಲ್ಲದೆ ಲಾಕ್‌ಡೌನ್ ಸಮಯದಲ್ಲಿ ಮೊದಲ ಬಾರಿಗೆ ಆನ್ ಲೈನ್ ತರಗತಿಗಳನ್ನು ನಡೆಸಿದ ಹೆಗ್ಗಳಿಕೆ ಇವರದಾಗಿತ್ತು.
ವಿದ್ಯಾರ್ಥಿಗಳಿಗೆ ಕ್ವಿಝ್ ಕಾರ್ಯಕ್ರಮಗಳನ್ನು ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ನಡೆಸಿದ ಪ್ರಾವಿಣ್ಯತೆಯನ್ನು ಪಡೆದಿರುವಇವರು ಭೌತಶಾಸ್ತ್ರ ವಿಷಯದಲ್ಲಿ ಕೋಚಿಂಗ್ ತರಗತಿಯನ್ನು ನೀಡುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions