ಪುತ್ತೂರು, ಸೆ 21 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು. ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ.
ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
