ಮಂಗಳೂರು ಸೇರಿದಂತೆ ಇಂದು ದೇಶಾದ್ಯಂತ ಎಸ್‌ಡಿಪಿಐ (SDPI) ಮತ್ತು ಪಿಎಫ್‌ಐ(PFI) ಕಚೇರಿಗಳ ಮೇಲೆ ಎನ್‌ಐಎ (NIA) ಮಿಂಚಿನ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿ ಕೆಲವರನ್ನು ಬಂಧಿಸಿದೆ ಎಂದು ವರದಿಯಾಗಿದೆ.
ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 22 ರಂದು ಗುರುವಾರ ಮುಂಜಾನೆ ಎನ್‌ಐಎ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿತು. ಮಂಗಳೂರು ನಗರದ ಸುತ್ತಮುತ್ತಲಿನ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ನೆಲ್ಲಿಕಾಯಿ ರಸ್ತೆ, ಬಜ್ಪೆ, ಕುಳಾಯಿ ಮತ್ತು ಕಾವೂರು ಕಚೇರಿಗಳ ಮೇಲೆ ಎನ್‌ಐಎ ಶೋಧಕರು ತಂಡಗಳಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಂದು ನಸುಕಿನ ಜಾವವೇ ಎನ್‌ಐಎ ದಾಳಿ ನಡೆಸಿದೆ.
ಮಂಗಳೂರು ನಗರದಲ್ಲಿನ ಪಿಎಫ್ಐ ಹಾಗೂ ಎಸ್‌ಡಿಪಿಐ ಜಿಲ್ಲಾ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಇಂದು ನಸುಕಿನ ಜಾವ 3.30ರ ಸುಮಾರಿಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.