ಬೆಂಗಳೂರಿನಲ್ಲಿ PayCm ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿ ಕೆಲವು ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ.
ಮೂವರು ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿಗಳಿಗೆ ಹಣ ಹಾಗೂ ಆಮಿಷ ನೀಡಿಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಳೆದ ರಾತ್ರಿ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮೂವರು ಪೋಸ್ಟರ್ ಅಂಟಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಠಾಣೆಯಲ್ಲಿ ಆರು ಜನರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಮಿಕ ಘಟಕದ ಅಧ್ಯಕ್ಷರ ಮೇಲೂ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿಗಳಿಗೆ ಪೋಸ್ಟರ್ ಅಂಟಿಸುವಂತೆ ಹೇಳಿದ್ದಾರೆಂದು ಇವರ ಮೇಲೆ ಕೇಸ್ ದಾಖಲಾಗಿದೆ.