ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವುಗಳ ನಡುವೆ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವವನ್ನು ನೀಡುವ ತಿಳುವಳಿಕೆಯ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು.
ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಮಾಡಬಯಸುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುವುದು, ವಿವಿಧ ದೇಶಗಳ ವಿಶ್ವವಿದ್ಯಾನಿಲಯಗಳ ಮಾಹಿತಿ ನೀಡುವುದು, ಅಲ್ಲಿ ಪ್ರವೇಶ ಪಡೆಯುವುದಕ್ಕೆ ಬೇಕಾದ ತರಬೇತಿಯನ್ನು ನೀಡುವುದು ಮುಂತಾದ ವಿಷಯಗಳಲ್ಲಿ ಸಹಭಾಗಿತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ.
ಅಲ್ಲದೆ ಅಂತಾರಾಷ್ಟ್ರೀಯ ಸಮ್ಮೇಳನಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಒದಗಿಸುವುದು, ಉಪನ್ಯಾಸಕರಿಗೆ ತರಬೇತಿಗಳನ್ನು ನೀಡುವುದೂ ಇದರಲ್ಲಿ ಸೇರಿದೆ.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಎಂಬಿಎ ವಿಭಾಗದ ಪ್ರೊ.ರೋಬಿನ್ ಶಿಂಧೆ, ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವಿಭಾಗ ಪ್ರಬಂಧಕ ಅಜಯ್ ಚಂದ್ರನ್.ಬಿ, ಸಹಾಯಕ ವ್ಯವಸ್ಥಾಪಕ ಶಿಜೋ ಮೊನ್ ಯೇಸುದಾಸ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಪನ್ಮೂಲ ವ್ಯಕ್ತಿಗಳು ಉನ್ನತ ಶಿಕ್ಷಣ ಮತ್ತು ಔದ್ಯೋಗಿಕ ಅವಕಾಶಗಳು ಎನ್ನುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions