ಪುತ್ತೂರು: ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರತರಲು ಇರುವ ಅವಕಾಶ ಸ್ಪರ್ಧೆಗಳು. ಆರೋಗ್ಯಕರ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೂ ಅವಶ್ಯಕ. ಸೋಲು-ಗೆಲುವು- ಬಹುಮಾನ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಪ್ರಾಚಾರ್ಯೆ ಸುಚಿತ್ರಾ ಪ್ರಭು, ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ ಎಸ್ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಕನ್ನಡ ಉಪನ್ಯಾಸಕ ಸತೀಶ ಕೆ ಕಾರ್ಯಕ್ರಮ ನಿರೂಪಿಸಿದರು.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ