ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸ0ಸ್ಥೆ ವಿದ್ಯೋದಯ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು 29 ಸೆಪ್ಟೆಂಬರ್ 2022ರಂದು ಆಯೋಜಿಸಲಾಗಿತ್ತು.
ಶ್ರೀಮತಿ ಶರ್ಮಿಳಾ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರು ಕಾರ್ಯಕ್ರಮ ಉದ್ಘಾಟಿಸಿ, ಪ್ರಸ್ತಾವನೆಗೈದರು. ಡಾ| ಸುನಿಲ್, ವೈದ್ಯರು, ಎ.ವಿ. ಬಾಳಿಗ ಆಸ್ಪತ್ರ‍್ರೆ, ಉಡುಪಿ ಇವರು ಮಾದಕದ್ರವ್ಯ ವ್ಯಸನ ಮತ್ತು ದುಷ್ಪರಿಣಾಮಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು ಇದರ ವಿಷ ವರ್ತುಲದೊಳಗೆ ಸಿಗದಂತೆ ಜಾಗರೂಕರಾಗಬೇಕೆಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್‌ಕುಮಾರ್ ಸ್ವಾಗತಿಸಿ ಧನ್ಯವಾದ ಅರ್ಪಿಸಿದ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಶ್ರೀ ಮಾರುತಿ, ಮತ್ತು ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ರಂಜನಾ ಕೆ. ಉಪಸ್ಥಿತರಿದ್ದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

