Monday, May 20, 2024
Homeಸುದ್ದಿರಾಜ್ಯ ಮಟ್ಟದ ಚೆಸ್‌ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ದೀಪ್ತಿ ಲಕ್ಷ್ಮಿ ದ್ವಿತೀಯ

ರಾಜ್ಯ ಮಟ್ಟದ ಚೆಸ್‌ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ದೀಪ್ತಿ ಲಕ್ಷ್ಮಿ ದ್ವಿತೀಯ

ಪುತ್ತೂರು, ಅ 2: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ರಾಜ್ಯ ದಸರಾ ಕ್ರೀಡಾಕೂಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನ0ದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪ್ತಿ ಲಕ್ಷ್ಮಿ ಕೆದ್ವಿತೀಯ ಸ್ಥಾನ ಗಳಿಸಿದ್ದಾರೆ.

ಈಕೆ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆಯ ಶಂಕರ ಪ್ರಸಾದ್ ಕೆ ಮತ್ತು ಉಷಾ ದಂಪತಿ ಪುತ್ರಿ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಈಕೆ ತರಬೇತಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments