ಭೀಕರ ಅಪಘಾತದಲ್ಲಿವೊಂದರಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಅಣ್ಣ – ತಂಗಿ ದಾರುಣ ಅಂತ್ಯವನ್ನು ಕಂಡಿದ್ದಾರೆ. ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ಕಾರು ಮತ್ತು ಸ್ಕೂಟಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಜಾಲ್ಸೂರು ಮತ್ತು ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಸ್ಕೂಟಿ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ.
ಅಣ್ಣ ನಿಶಾಂತ್ ಮತ್ತು ತಂಗಿ ಮೋಕ್ಷಾ ಇಬ್ಬರೂ ಮೃತಪಟ್ಟಿದ್ದಾರೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿತ್ತು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಸುಳ್ಯ ಸರಕಾರೀ ಆಸ್ಪತ್ರೆ ತಲುಪುವಷ್ಟರಲ್ಲೇ ನಿಶಾಂತ್ ಮೃತಪಟ್ಟಿದ್ದನು.
ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿರುವಾಗ ದಾರಿ ಮಧ್ಯದಲ್ಲಿ ಆಕೆಯೂ ಕೊನೆಯುಸಿರೆಳೆದಳು ಎಂದು ತಿಳಿದುಬಂದಿದೆ.
ಅಣ್ಣ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತಂಗಿ ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

