ಖಿನ್ನತೆಗೆ ಒಳಗಾಗಿ ವಿಧಿವಿಜ್ಞಾನ ಪ್ರಯೋಗಾಲಯದ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಧಿವಿಜ್ಞಾನ ಮನೋವಿಜ್ಞಾನ ವಿಭಾಗದ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆ ಸೆಪ್ಟೆಂಬರ್ 30 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ವಿಧಿ ವಿಜ್ಞಾನ ಪ್ರಯೋಗಾಲಯ (ವಿಧಿವಿಜ್ಞಾನ ಪ್ರಯೋಗಾಲಯ) ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಡಿವಾಳ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ವಿಧಿವಿಜ್ಞಾನ ಮನೋವಿಜ್ಞಾನ ವಿಭಾಗದ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆ ಸೆಪ್ಟೆಂಬರ್ 30 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನನ್ನ ಸಾವಿಗೆ ನಾನೇ ಕಾರಣ, ಕ್ಷಮಿಸಿ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಪತಿಯಿಂದ ವಿಚ್ಛೇದನ ಪಡೆದಿದ್ದ ಶ್ರುತಿ (Divorce) ಈ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಖಿನ್ನತೆಯಿಂದ ಶೃತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.