ನೇಪಾಳ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ, (ಚಿತ್ರದಲ್ಲಿ ಬಿಳಿ ಉಡುಪು ಧರಿಸಿದವರು) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.
ಇಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಆತನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರು ಅಂತಿಮವಾಗಿ ನೇಪಾಳಕ್ಕೆ ಆಗಮಿಸಿದ್ದಾರೆ ಮತ್ತು ಅಪ್ರಾಪ್ತ ವಯಸ್ಕ ಹುಡುಗಿಯ ಮೇಲೆ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಸಂತ್ರಸ್ತೆ ಹುಡುಗಿ ಕಾಠ್ಮಂಡು ಪೊಲೀಸ್ ಠಾಣೆಯಲ್ಲಿ ಸ್ಟಾರ್ ಕ್ರಿಕೆಟಿಗನ ವಿರುದ್ಧ ಪೊಲೀಸ್ ದೂರು ನೀಡಿದ ನಂತರ ಆಪಾದಿತ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.
ಸುದ್ದಿ ಸಂಸ್ಥೆ ANI ಪ್ರಕಾರ, ಅಕ್ಟೋಬರ್ 6, ಗುರುವಾರದಂದು ಕಾಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಲಾಮಿಚಾನೆಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.