ದುರ್ಗಾದೇವಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿ 8 ಮಂದಿ ಸಾವಿಗೀಡಾಗಿದ್ದಾರೆ.
ಮಾತ್ರವಲ್ಲದೆ ಹಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಜಲ್ಪೈಗುರಿಯ ಮಲ್ಬಜಾರ್‌ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ವಿಜಯದಶಮಿಯ ದಿನದಂದು ದುರ್ಗಾದೇವಿಯ ವಿಗ್ರಹ ವಿಸರ್ಜನಾ ಸಮಯದಲ್ಲಿ ಒಟ್ಟುಗೂಡಿದ್ದ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಪ್ರವಾಹದಿಂದಾಗಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದಾಗ ಬಿಜೋಯ ದಶಮಿಯಂದು (ವಿಜಯ ದಶಮಿ) ಮಾಲ್ ನದಿಯ ದಡದಲ್ಲಿ ಜನಜಂಗುಳಿ ಸೇರಿತ್ತು. ಘಟನೆ ನಡೆದ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಇದುವರೆಗೆ ಎಂಟು ಮೃತದೇಹಗಳು ಪತ್ತೆಯಾಗಿವೆ. ಜಲಪೈಗುರಿಯಲ್ಲಿ ಪ್ರವಾಹದ ನಂತರ ನಾಪತ್ತೆಯಾಗಿರುವವರಿಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ.