ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಇವರು 12.69 ಮೀಟರ್ ಜಿಗಿದು ದಾಖಲೆಯನ್ನು ನಿರ್ಮಿಸಿದ್ದಾರೆ. 10 ವರ್ಷಗಳ ಹಿಂದೆ ಅಂದರೆ 2013ರಲ್ಲಿ ನಿರ್ಮಿಸಿದ್ದ 12.38 ಮೀಟರ್‌ಗಳ ಹಳೆಯ ದಾಖಲೆಯನ್ನು ಮುರಿದು ತಮ್ಮ ಹೆಸರನ್ನು ಛಾಪಿಸಿದರು.
ಇದೇ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿ0ಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಇವರಿಗೆ ಭಾರತೀಯ ಸೇನಾಪಡೆಗಳ ವಿಶ್ರಾಂತ ಅತ್ಲೆಟಿಕ್ ಮುಖ್ಯ ತರಬೇತುದಾರ ರವಿಶಂಕರ ಮುಕುಂದ ತರಬೇತಿಯನ್ನು ನೀಡಿದ್ದಾರೆ. ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

