ಐಷಾರಾಮಿ ಬಸ್ ಮತ್ತು ಟ್ರೈಲರ್ ಟ್ರಕ್ ಪರಸ್ಪರ ಡಿಕ್ಕಿ ಹೊಡೆದವು. ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಇದುವರೆಗೆ 11 ಮಂದಿ ಬಲಿಯಾಗಿದ್ದಾರೆ.
ಯವತ್ಮಾಲ್‌ನಿಂದ 30 ಜನರು ಹೊರಟಿದ್ದರು ಮತ್ತು 19 ಜನರು ಮಧ್ಯದಲ್ಲಿ ಬಸ್ ಹತ್ತಿದರು. ಅವರನ್ನು ಗುರುತಿಸಲಾಗುತ್ತಿದೆ ಎಂದು ನಾಸಿಕ್ ಪೊಲೀಸ್ ಆಯುಕ್ತ ಜಯಂತ್ ನಾಯ್ಕನವರೆ ಹೇಳಿದ್ದಾರೆ.
ಮಹಾರಾಷ್ಟ್ರದ ನಾಸಿಕ್‌ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‌ಗೆ ಯವತ್ಮಾಲ್‌ನಿಂದ ಮುಂಬೈಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ನಾಸಿಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಕಟಿಸಲಾಗಿದೆ.
“ನನ್ನ ಮನೆಯ ಸಮೀಪವೇ ಘಟನೆ ನಡೆದಿದೆ. ಇಲ್ಲಿ ಭಾರಿ ವಾಹನಗಳು ಸಂಚರಿಸುತ್ತವೆ. ಘಟನೆಯ ನಂತರ ಬಸ್‌ಗೆ ಬೆಂಕಿ ತಗುಲಿ ಜನರು ಸುಟ್ಟು ಕರಕಲಾದರು. ನಾವು ನೋಡಿದೆವು ಆದರೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸರು ನಂತರ ಬಂದರು” ಎಂದು ನಾಸಿಕ್ ಬಸ್-ಟ್ರಕ್ ಡಿಕ್ಕಿಯ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರಿಕ್ಷಿಸಲಾಗುತ್ತಿದೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]