ಹನ್ನೊಂದನೆಯ ವರ್ಷದ ಸರ್ಪಂಗಳ ಯಕ್ಷೋತ್ಸವ ಮತ್ತು ಸರ್ಪಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಅಕ್ಟೋಬರ್ 15, 2022 ರಂದು ರಾತ್ರಿ 9.00 ಗಂಟೆಗೆ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಜರಗಲಿದೆ.
ಸಂಜೆ 6.00 ರಿಂದ 11.00ರವರೆಗೆ ‘ಹನುಮೋದ್ಭವ ಮಾರಣಾಧ್ವರ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ.
2022ನೆಯ ಸಾಲಿನ‘ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸ್ಮಾರಕ ಯಕ್ಷಗಾನ ಸಾಧಕ ಪ್ರಶಸ್ತಿ’ಯನ್ನು ಪಿ.ಟಿ. ಜಯರಾಮ ಭಟ್ ಅವರಿಗೆ ನೀಡಲಾಗುತ್ತಿದೆ. ಪ್ರಸಿದ್ಧ ಪದ್ಯಾಣ ಮನೆತನದ ಜಯರಾಮ ಭಟ್ಟರು ಸುಮಾರು ಮೂರು ದಶಕಗಳ ಕಾಲ ವಿವಿಧ ಮೇಳಗಳಲ್ಲಿ ಭಾಗವತರಾಗಿ, ಮದ್ದಲೆವಾದಕರಾಗಿ ತಿರುಗಾಟ ನಡೆಸಿದ ಅನುಭವ ಉಳ್ಳವರು.
ಈ ವರ್ಷದ‘ಸರ್ಪಂಗಳ ಕಲಾಸೇವಾ ಪುರಸ್ಕಾರ’ವನ್ನು ಕಟೀಲು ಮೇಳದಲ್ಲಿ ಸುಮಾರು ಐದು ದಶಕಗಳ ಕಾಲ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ ಪುತ್ತು ನಾಯ್ಕ ಬಸಕೋಡಿ ಇವರಿಗೆ ನೀಡಲಾಗುತ್ತಿದೆ.
ಅಂದು ಜರಗಲಿರುವ ಸಮಾರಂಭದಲ್ಲಿ ಪರ್ಯಾಯ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ‘ಸರ್ಪಂಗಳ ಯಕ್ಷೋತ್ಸವ’ದ ಆಯೋಜಕರಾದ ಡಾ.ಶೈಲಜಾ ಎಸ್. ಮತ್ತು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

