ಮಂಗಳವಾರ ಮುಂಜಾನೆ ಅಫ್ಘಾನಿಸ್ತಾನದ ಫೈಜಾಬಾದ್ ಪ್ರಾಂತ್ಯದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದು ಫೈಜಾಬಾದ್‌ನಿಂದ ಪೂರ್ವಕ್ಕೆ 89 ಕಿಮೀ ದೂರದಲ್ಲಿದೆ. ಭೂಕಂಪನವು ಭೂಮಿಯ ಮೇಲ್ಮೈಯಿಂದ 112 ಕಿಮೀ ಆಳದಲ್ಲಿತ್ತು.
ನಸುಕಿನ 4.53ಕ್ಕೆ ಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ವಿಜ್ಞಾನ ಕೇಂದ್ರ ತಿಳಿಸಿದೆ. ಹಾಗಾಗಿ ಭೂಕಂಪದಿಂದ ಆಗಿರುವ ಹಾನಿಯ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಮಾನವೀಯ ವ್ಯವಹಾರಗಳ ಸಮನ್ವಯಕ್ಕಾಗಿ UN ಕಚೇರಿಯ ಪ್ರಕಾರ, ಅಫ್ಘಾನಿಸ್ತಾನದಲ್ಲಿ 350,000 ಕ್ಕಿಂತ ಹೆಚ್ಚು ಜನರು ಹೆಚ್ಚು ಭೂಕಂಪ ಪೀಡಿತ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.
ಮೊನ್ನೆ ಜೂನ್ 22ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಭಾರೀ ಹಾನಿ ಸಂಭವಿಸಿತ್ತು. 6.1 ತೀವ್ರತೆಯ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಜುಲೈ 18 ರಂದು ಅಫ್ಘಾನಿಸ್ತಾನದಲ್ಲಿ ಮತ್ತೊಂದು 5.1 ತೀವ್ರತೆಯ ಭೂಕಂಪ ಸಂಭವಿಸಿದೆ.