ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾ ಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ
ದಿನಾಂಕ 09-10 2022ನೇ ರವಿವಾರ ಮಡಿಕೇರಿಯಲ್ಲಿ ನಡೆದ ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾ ಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಧ್ವಿತ್ ಶರ್ಮ (ಶ್ರೀ ಸುಧೀರ್.ಬಿ.ಎಸ್ ಮತ್ತು ಲತಾ ದಂಪತಿ ಪುತ್ರ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
5ನೇ ತರಗತಿಯ ಮಹತಿ.ಎಂ (ಶ್ರೀಶಿವರಂಜನ್.ಎಂ ಮತ್ತು ಲಾವಣ್ಯ ಭಟ್ ದಂಪತಿ ಪುತ್ರಿ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಇವರು Institute of Karate and Martial Arts ಶಾಖೆಯ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ
- ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ ಪ್ರದಾನ – ಭೀಷ್ಮ ವಿಜಯ ತಾಳಮದ್ದಳೆ