ಪುತ್ತೂರು, ಅ 13: ಬೆಂಗಳೂರಿನ ಶಿವನಹಳ್ಳಿಯ ರಾಮಕೃಷ್ಣ ಮಠದ ಸ್ವಾಮಿ ಮಂಗಳನಾಥಾನಂದಜಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರನ್ನುಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸ್ವಾಮೀಜಿಯವರು ಕಾಲೇಜು ಆವರಣವನ್ನು ಸಂದರ್ಶಿಸಿ ಕಾಲೇಜು ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಕಾಲೇಜಿನ ಹಿನ್ನಲೆ, ಸೌಲಭ್ಯಗಳು ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೂಜ್ಯರು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಾಮೀಜಿಯವರು ನಂತರ ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ವಿಕಸನ ಮಲ್ಟಿಮೀಡಿಯಾ ಸ್ಟುಡಿಯೋ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಪಾಂಚಜನ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕ – ಪ್ರಾಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

